ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣವಾಗುವ ಹಂತಕ್ಕೆ ಬಂದಿದ್ದು, ಡಿಸೆಂಬರ್‌ನಿಂದ ವಿಮಾನ ಹಾರಾಟ ಆರಂಭವಾಗಲಿದೆ ಎಂದು ಲೋಕಸಭೆ ಸದಸ್ಯ ಬಿ.ವೈ. ರಾಘವೇಂದ್ರ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಮೇ, ಜೂನ್ ಒಳಗೆ ರನ್ ವೇ ಕಾರ್ಯ ಪೂರ್ಣವಾಗಲಿದ್ದು, ಜುಲೈನಲ್ಲಿ ಟರ್ಮಿನಲ್ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಡಿಸೆಂಬರ್ ಕೊನೆಯೊಳಗೆ ವಿಮಾನ ಸಂಚಾರ ಆರಂಭವಾಗಲಿದೆ ಎಂದರು.
ಕೇಂದ್ರ ನಾಗರಿಕ ವಿಮಾನಯಾನ ಸಚಿವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದೇನೆ. ವಿಮಾನಗಳ ಮಾರ್ಗ ಕುರಿತು ಪಟ್ಟಿಯನ್ನು ಸಿದ್ಧಪಡಿಸಿಕೊಟ್ಟಿದ್ದೇನೆ. ಇದರಿಂದ ಜಿಯ ಜನತೆಗೆ ಮತ್ತು ಕೈಗಾರಿಕೋದ್ಯಮಿಗಳಿಗೆ ಅನುಕೂಲವಾಗಲಿದೆ. ವಿಮಾನಗಳ ಹಾರಾಟದ ಮಾರ್ಗಗಳು ಕೂಡ ಶೀಘ್ರ ನಿರ್ಧಾರವಾಗಲಿದ್ದು, ಈ ಸಂಬಂಧ ಟೆಂಡರ್ ಪ್ರಕ್ರಿಯೆ ಹಂತದಲ್ಲಿದೆ ಎಂದರು.
ಕೇಂದ್ರ ಸಚಿವರು ದೂರವಾಣಿ ಮೂಲಕ ರಾಜ್ಯದ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿದ್ದು, ವಿಮಾನ ನಿಲ್ದಾಣದ ನಿರ್ವಹಣೆಕುರಿತು ಚರ್ಚೆ ನಡೆಯುತ್ತಿದೆ.ನಿರ್ವಹಣೆ ಜವಾಬ್ದಾರಿಯನ್ನು ರಾಜ್ಯ ಸರ್ಕಾರ ಹೊತ್ತುಕೊಳ್ಳಬೇಕೋ ಅಥವಾ ವಿಮಾನ ನಿಲ್ದಾಣ ಪ್ರಾಧಿಕಾರ ವಹಿಸಿಕೊಳ್ಳಬೇಕೆನ್ನುವ ಕುರಿತು ಚರ್ಚೆ ನಡೆದಿದೆ. ಮುಂದಿನ ವಾರ ಈ ಸಂಬಂಧ ಡ್ರಾಫ್ಟ್ ಸಿದ್ಧವಾಗಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಶಾಸಕ ಕೆ.ಬಿ. ಅಶೋಕ್ ನಾಯ್ಕ. ಬಿಜೆಪಿ ಜಿಧ್ಯಕ್ಷ ಟಿ.ಡಿ. ಮೇಘರಾಜ್, ಮೇಯರ್ ಸುನಿತಾ ಅಣ್ಣಪ್ಪ, ಎನ್.ಜೆ. ನಾಗರಾಜ, ಎಸ್.ಎನ್. ಚನ್ನಬಸಪ್ಪ, ಬಿ.ಆರ್. ಮಧುಸೂಧನ್, ಶಿವರಾಜ್, ಜಗದೀಶ್ ಇತರರು ಇದ್ದರು.