Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಯುವಕನ ಬರ್ಬರ ಹತ್ಯೆ , ಮೆಗ್ಗಾನ್ ಆಸ್ಪತ್ರೆ ಬಳಿ ಜಮಾಯಿಸಿದ ಜನ

ಶಿವಮೊಗ್ಗದ ಕಾಮತ್ ಪೆಟ್ರೋಲ್ ಬಂಕ್ ಸಮೀಪದ ಭಾರತೀ ಕಾಲೋನಿಯಲ್ಲಿ ಭಾನುವಾರ ರಾತ್ರಿ ಹಿಂದೂ ಸಂಘಟನೆಯ ಕಾರ್ಯಕರ್ತ ಹರ್ಷ(೨೬) ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಮೆಗ್ಗಾನ್ ಆಸ್ಪತ್ರೆ ಶವಾಗಾರದ ಬಳಿ ನೂರಾರು ಜನ ಜಮಾಯಿಸಿದ್ದಾರೆ.
ಸ್ವಿಫ್ಟ್ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಹರ್ಷನನ್ನು ಭಾರತಿ ನಗರದಲ್ಲಿಯೇ ಮಾರಕಾಸ್ತ್ರಗಳಿಂದ ಇರಿದು ಕೊಲೆ ಮಾಡಿದ್ದಾರೆ. ದೊಡ್ಡಪೇಟೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಮೃತ ಹರ್ಷ ಭಜರಂಗದಳ ಸೇರಿದಂತೆ ಹಿಂದೂ ಸಂಘಟನೆಯಲ್ಲಿ ಸಕ್ರಿಯನಾಗಿದ್ದ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ವೈಯಕ್ತಿಕ ದ್ವೇಷದ ಮೇಲೆ ಕೊಲೆ ನಡೆದಿರುವ ಸಾಧ್ಯತೆಯ ಬಗ್ಗೆಯೂ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಹಿಜಾಬ್ ಗಲಾಟೆ ಹಿನ್ನೆಲೆಯಲ್ಲಿ ಸೂಕ್ಷ್ಮವಾಗಿದ್ದ ನಗರದಲ್ಲಿ ಈ ಘಟನೆಯ ದುರ್ಲಾಭ ಪಡೆದುಕೊಳ್ಳದಂತೆ ಪೊಲೀಸರು ಕ್ರಮ ಕೈಗೊಂಡಿದ್ದು, ನಗರದ ಅತಿಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Ad Widget

Related posts

ಡಿಜಿಟಲ್ ಮೀಡಿಯಾದಿಂದ ಯುವಕರಿಗೆ ಉತ್ತಮ ಭವಿಷ್ಯ , ಮುಖ್ಯಮಂತ್ರಿ ಸಲಹೆಗಾರ ಪ್ರಶಾಂತ್ ಪ್ರಕಾಶ್ ಅಭಿಪ್ರಾಯ

Malenadu Mirror Desk

ನಾಗರೀಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದಿಂದ ಈಶ್ವರಪ್ಪ ಮನೆ ಮುಂದೆ ಪ್ರತಿಭಟನೆ

Malenadu Mirror Desk

ರೌಡಿಶೀಟರ್ ಹತ್ಯೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.